ಭಾನುವಾರ, ನವೆಂಬರ್ 20, 2016

ಜನಪದ ಅಡುಗೆ - ಡಾ. ವೈ. ಸಿ. ಭಾನುಮತಿ

ಜನಪದ ಅಡುಗೆ - ಡಾ. ವೈ. ಸಿ. ಭಾನುಮತಿ

ಶೀರ್ಷಿಕೆ: ಜನಪದ ಅಡುಗೆ
ಲೇಖಕರು: ಡಾ. ವೈ. ಸಿ. ಭಾನುಮತಿ
ಪ್ರಕಾಶಕರು: ನಿರ್ದೇಶಕರು, ಪ್ರಸಾರಾಂಗ, ಮಾನಸಗಂಗೋತ್ರಿ, ಮೈಸೂರು. 
ಪ್ರಧಮ ಮುದ್ರಣ: 2007


ಪುಸ್ತಕ ಕುರಿತು: ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಮೈಸೂರು ವಿಶ್ವವಿದ್ಯಾನಿಲಯದ ಮೊದಲನೆಯ ಸೆನೆಟ್ ಸಭೆಯಲ್ಲಿ ಹೇಳಿದ ಮಾತುಗಳನ್ನು ಈಗ ನೆನಪಿಸಿಕೊಳ್ಳಬಹುದು. "ಕಾರಣಾಂತರಗಳಿಂದ ವಿಶ್ವವಿದ್ಯಾನಿಲಯವನ್ನು ಪ್ರವೇಶಿಸಲು ಅಶಕ್ತರಾದ ಜನಸಾಮಾನ್ಯರಿಗೆ ವಿಶ್ವವಿದ್ಯೆಯ ಪರಿಚಯ ಮಾಡಿಕೊಡಲು ನಮ್ಮ ವಿಶ್ವವಿದ್ಯಾನಿಲಯ ಶ್ರಮಿಸಬೇಕು. ಈ ಕಾರ್ಯವು ಪ್ರಚಾರೋಪನ್ಯಾಸ ಮತ್ತು ಪ್ರಕಟಣೆಗಳ ಮೂಲಕ ನಡೆಯಬೇಕಾಗಿದೆ. ಅತ್ಯಂತ ಪ್ರಯೋಜನಕಾರಿಯಾದ ಈ ಮಹತ್ಕಾರ್ಯವನ್ನು ವಿಶ್ವವಿದ್ಯಾನಿಲಯವು ಬೇಗನೆ ಕಾರ್ಯರೂಪಕ್ಕೆ ತರುವುದೆಂದು ನಂಬಿದ್ದೇನೆ." 1933ರಲ್ಲಿ ಸ್ಥಾಪನೆಯಾದ ಅಧ್ಯಾಪಕರ ಸಂಘ ವಿಶ್ವವಿದ್ಯಾನಿಲಯದ ಆಶ್ರಯದಲ್ಲಿ ಈ ಪ್ರಚಾರೋಪನ್ಯಾಸಗಳನ್ನು ಪ್ರಾರಂಭಿಸಿತು. ಈ ಪ್ರಯೋಗದ ಖ್ಯಾತಿ ವಿದೇಶಗಳಿಗೂ ಹಬ್ಬಿತು. "ನಹಿ ಜ್ಞಾನೇನ ಸದೃಶಂ" ಎಂಬ ಮೈಸೂರು ವಿಶ್ವವಿದ್ಯಾನಿಲಯದ ಆದರ್ಶದ ಕಾರ್ಯಾಚರಣೆಯಲ್ಲಿ ಪ್ರಚಾರೋಪನ್ಯಾಸ ಮಾಲೆಯೂ ಒಂದು. ಈ ಉಪನ್ಯಾಸಗಳನ್ನು ಕೇಳಲು ಅವಕಾಶ ಸಿಕ್ಕದವರು ತಿಳಿವಳಿಕೆ ಪಡೆಯಲು ಅನುವಾಗುವಂತೆ ಪ್ರಚಾರ ಪುಸ್ತಕಮಾಲೆ ಅಸ್ತಿತ್ವಕ್ಕೆ ಬಂದು, ಅದು ಅತ್ಯಂತ ಜನಪ್ರಿಯವಾಗಿದೆ. ಸುವರ್ಣ ಪ್ರಚಾರ ಪುಸ್ತಕಮಾಲೆಯಡಿಯಲ್ಲಿ ಒಂದು ದಶಕದ ನಂತರ ಈಗ ಹೊಸದಾಗಿ 50 ಶೀರ್ಷಿಕೆಗಳು ಪ್ರಕಟವಾಗುತ್ತಿವೆ. ಇವುಗಳಲ್ಲಿ ಸಾಹಿತ್ಯ, ಅರ್ಥಶಾಸ್ತ್ರ, ವೈದ್ಯ ವಿಜ್ಞಾನ, ಪ್ರಾಣಿ ವಿಜ್ಞಾನ ಮುಂತಾದ ವಿಷಯಗಳನ್ನು ಕುರಿತಂತೆ ಅತ್ಯಂತ ಉಪಯುಕ್ತ ಪುಸ್ತಿಕೆಗಳು ಸೇರಿದ್ದು, ಇವು ಕೂಡ ಎಲ್ಲ ಪುಸ್ತಕ ಪ್ರೇಮಿಗಳ ಮತ್ತು ಜ್ಞಾನಾಸಕ್ತರ ಮೆಚ್ಚುಗೆ ಪಡೆಯುತ್ತವೆಂದು ಆಶಿಸುತ್ತೇನೆ. - ಜೆ. ಶಶಿಧರ ಪ್ರಸಾದ್.



ಸಾಗರದಂತೆ ವಿಶಾಲವಾಗಿರುವ ಶ್ರೀಮಂತ ಕನ್ನಡ ಸಾಹಿತ್ಯಿಕ ಸಂಪತ್ತಿನಿಂದ ಕೆಲವು ಪುಸ್ತಕ ಮಣಿರತ್ನಗಳನ್ನು ಆರಿಸಿ, ಈ ಕಾರ್ಯಕ್ರಮದಲ್ಲಿ ಪರಿಚಯಿಸುವ ಅಭಿಲಾಷೆಯೊಂದಿಗೆ ಈ ಪ್ರಸ್ತುತಿ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ