ಬುಧವಾರ, ನವೆಂಬರ್ 30, 2016

ಒಡಲಾಳ - ದೇವನೂರ ಮಹಾದೇವ

ಒಡಲಾಳ - ದೇವನೂರ ಮಹಾದೇವ

ಶೀರ್ಷಿಕೆ: ಒಡಲಾಳ
ಲೇಖಕರು: ದೇವನೂರ ಮಹಾದೇವ
ಪ್ರಕಾಶಕರು: ನವ್ವಾಲೆ ಪ್ರಕಾಶನ, ಕುವೆಂಪುನಗರ, ಮೈಸೂರು. 
ಪ್ರಧಮ ಮುದ್ರಣ: 2003 

ಪುಸ್ತಕ ಕುರಿತು: ಖಂಡವಿದೆಕೋ ಮಾಂಸವಿದೆಕೋ ಎನ್ನುತ್ತ ತಮ್ಮ ಕಥೆಗಳನ್ನು ಕನ್ನಡಿಗರಿಗೆ ಕೊಟ್ಟವರು ದೇವನೂರ ಮಹಾದೇವ. ಅಲ್ಲಿಂದ ಕೆಲಕಾಲ ಕಳೆದ ಮೇಲೆ 'ಒಡಲಾಳ' ಎಂಬೊಂದು ಕಥೆ ಬರೆದರು. ಓದಿದವರಿಗೆ ಗುಂಗು ಹಿಡಿಸುವ ಕತೆ. ಸಾಕವ್ವ ಅವಳ ಮಕ್ಕಳು ಮೊಮ್ಮಕ್ಕಳು ಕನ್ನಡ ಪ್ರಜ್ಞೆಯೊಳಗೆ ಬಂದು ಕುಳಿತರು. ಸಾಕವ್ವ ಹೇಳುವ ಯಮದವರ ಕತೆಗಾಗಿ ಜಾನಪದ ಪಂಡಿತರು, ಪುಟಗೌರಿ ನವಿಲಿನ ಚಿತ್ರಕ್ಕಾಗಿ ಕಲೆಗಾರರು, ದುಪ್ಟಿಕಮೀಷನರಿಗಾಗಿ ಸಾಹಿತ್ಯ ವಿಮರ್ಶಕರು, ಕತ್ತಲ ಲೋಕದಲ್ಲಿ ಫಳಾರನೆ ಗಡಿಯಾರದ ಮಿಂಚು ಮಿಂಚಿಸುವ ಗುರುಸಿದ್ಧನಿಗಾಗಿ ಬಂಡಾಯಗಾರರು ಹುಡುಕಾಟ ಮುಂದುವರೆಸಿದ್ದಾರೆ. ಒಡಲಾಳದ ಶಿವು ಈಗ ಈ ಕತೆಯನ್ನು ಓದುತ್ತಿರಬಹುದು. ಆ ಕತೆಯಲ್ಲಿ ತನ್ನ ಮಾದರಿಯನ್ನು ಕಂಡುಕೊಳ್ಳುತ್ತಿರಬಹುದು. ಒಡಲಾಳದಂತಹ ಕೃತಿಗಳು ಮಾತ್ರವೇ ಒಂದು ಸಂಸ್ಕೃತಿಯಲ್ಲಿ ಕ್ರಿಯಾವರ್ತಗಳನ್ನು ಹುಟ್ಟಿಹಾಕಬಲ್ಲವು ಎಂಬುದನ್ನು ತಮ್ಮ ಗಮನಕ್ಕೆ ತರುವುದಕ್ಕೆ ಈ ಮಾತು ಹೇಳಿದೆ. ಕೃತಿಯನ್ನು ಅರಿಯಲು ಲೋಕದ ಮಾನದಂಡಗಳನ್ನು ಹುಡುಕುವ ನಮಗೆ 'ಅಯ್ಯಾ ಹಾಗಲ್ಲ, ಈ ಕೃತಿಯ ಮೂಲಕ ಲೋಕವನ್ನು ಅರಿಯಲು ಸಾಧ್ಯವೇ ನೋಡು' ಎಂದು ಇಂಥ ಕೃತಿಗಳು ಕೇಳುತ್ತವೆ. - ಡಾ. ಕೆ.ವಿ. ನಾರಾಯಣ.



ಸಾಗರದಂತೆ ವಿಶಾಲವಾಗಿರುವ ಶ್ರೀಮಂತ ಕನ್ನಡ ಸಾಹಿತ್ಯಿಕ ಸಂಪತ್ತಿನಿಂದ ಕೆಲವು ಪುಸ್ತಕ ಮಣಿರತ್ನಗಳನ್ನು ಆರಿಸಿ, ಪರಿಚಯಿಸುವ ಅಭಿಲಾಷೆಯೊಂದಿಗೆ ಮೂಡಿಬಂದ ಕಹಳೆ ಆರನೇ ಆವೃತ್ತಿಯ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಲ್ಲಿ ಪ್ರತ್ಯಕ್ಷ-ಪರೋಕ್ಷವಾಗಿ ಕಾರಣಕರ್ತರಾದ ಪ್ರತಿಯೊಬ್ಬರಿಗೂ ಹೃದಯಪೂರ್ವಕ ವಂದನೆಗಳು; ನೀವೆಲ್ಲರೂ ಸದಾ ಕಹಳೆಯೊಟ್ಟಿಗೆ ಇರುತ್ತೀರೆಂದು ನಂಬಿದ್ದೇವೆ.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ