ಬರೆಯಲೇ ಬೇಕೆಂದು ಹಠಕ್ಕೆ ಬಿದ್ದಾಗ
ಬರೆವುದೆಲ್ಲವೂ ಸಪ್ಪೆ
ತಾನಾಗೇ ಬರೆಯಿಸಿಕೊಳ್ಳುವ ಒಂದು ಪದವಾದರೂ
ಕಾವ್ಯ ಕುಪ್ಪೆ
ಬರೆವ ನಾನೊಬ್ಬನೇ ಬಲ್ಲವನೆಂದನಿಸಿದೊಡೆ
ಬರೆವುದೆಲ್ಲವೂ ಸಪ್ಪೆ
ತಾನಾಗೇ ಬರೆಯಿಸಿಕೊಳ್ಳುವ ಒಂದು ಪದವಾದರೂ
ಕಾವ್ಯ ಕುಪ್ಪೆ
ಬರೆವ ನಾನೊಬ್ಬನೇ ಬಲ್ಲವನೆಂದನಿಸಿದೊಡೆ
ಬರೆಯದಿರುವುದೇ ಒಳಿತು
ಬರೆವುದೇ ಆದರೆ ಬರಿದಾಗಬೇಕು ನಾ
ಬರಹದಲಿ ಮಿಂದು ಬೆರೆತು
ಬರೆವುದೇ ಆದರೆ ಬರಿದಾಗಬೇಕು ನಾ
ಬರಹದಲಿ ಮಿಂದು ಬೆರೆತು
ಅರೆ-ಬರೆ ಬರೆವುದು, ಭಾರಿ ಏನಲ್ಲ ಇದು
ಬರಿ ಮೌನದೊಂದು ಛಾಯೆ
ಬರೆದಷ್ಟೂ ಬರಿದಾಗದ ಭಾಷೆ ನನ್ನದು
ಏನಿದರ ಮರ್ಮ ಮಾಯೆ?!!
ಬರವಿಲ್ಲ, ನೆರೆಯಿಲ್ಲ ಬಂದಷ್ಟೂ ಸಿರಿಯೇ
ಬರಿ ಮೌನದೊಂದು ಛಾಯೆ
ಬರೆದಷ್ಟೂ ಬರಿದಾಗದ ಭಾಷೆ ನನ್ನದು
ಏನಿದರ ಮರ್ಮ ಮಾಯೆ?!!
ಬರವಿಲ್ಲ, ನೆರೆಯಿಲ್ಲ ಬಂದಷ್ಟೂ ಸಿರಿಯೇ
ಇರದಲ್ಲಿಯೂ ಸುಸ್ಥಿತಿ
ಎಲ್ಲ ಮುಗಿದಿರಲೊಂದು ಮತ್ತೆ ಮೊದಲಾಗಲು
ಹಿಡಿದಂತೆ ತಿಳಿ ಆರತಿ
ಎಲ್ಲ ಮುಗಿದಿರಲೊಂದು ಮತ್ತೆ ಮೊದಲಾಗಲು
ಹಿಡಿದಂತೆ ತಿಳಿ ಆರತಿ
ಬನ್ನಣೆಗೆ ಬಣ್ಣ, ಬವಣೆಗೂ ಬಾಣ
ಬಿನ್ನವಿದು ಭಾವಗಳಿಗೆ
ಹೆಸರಿಡಲು ಮತ್ತಷ್ಟು ಮೆರುಗು ಮೂಡುವುದು
ಹಾಳೆಯ ಹೂವುಗಳಿಗೆ!!
ಬಿನ್ನವಿದು ಭಾವಗಳಿಗೆ
ಹೆಸರಿಡಲು ಮತ್ತಷ್ಟು ಮೆರುಗು ಮೂಡುವುದು
ಹಾಳೆಯ ಹೂವುಗಳಿಗೆ!!
-- ರತ್ನಸುತ
ಲೇಖಕರ ಕಿರುಪರಿಚಯ | |
ಶ್ರೀ ಭರತ್ ಎಂ. ವೆಂಕಟಸ್ವಾಮಿ ವೃತ್ತಿಯಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿರುವ ಇವರು ಪ್ರಸ್ತುತ ಬೆಂಗಳೂರಿನ ಖಾಸಗಿ ಸಂಸ್ಥೆಯೊಂದರಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಬೆಂಗಳೂರು ಸಮೀಪದ ಮಂಚಪ್ಪನಹಳ್ಳಿ ಇವರ ಹುಟ್ಟೂರು. Blog | Facebook | Twitter |
ಕವಿತೆ ಪ್ರಕಟಿಸಿದ ಕಹಳೆ ತಂಡಕ್ಕೆ ಧನ್ಯವಾದ :)
ಪ್ರತ್ಯುತ್ತರಅಳಿಸಿಕಹಳೆ ಕಾರ್ಯಕ್ರಮಕ್ಕೆ ನಿಮ್ಮ ನಿರಂತರ ಪ್ರೊತ್ಸಾಹ ಹಾಗೂ ಸಹಕಾರಕ್ಕೆ ನಾವು ಋಣಿಯಾಗಿದ್ದೇವೆ.
ಅಳಿಸಿ