ಶುಕ್ರವಾರ, ನವೆಂಬರ್ 1, 2019

ನಮ್ಮ ಕನ್ನಡ ನಾಡು

ಸಮಸ್ತ ಕನ್ನಡಿಗರಿಗೆ ಕನ್ನಡ ರಾಜ್ಯೋತ್ಸವ ನಾಡಹಬ್ಬದ ಶುಭಾಶಯಗಳು.

ನವಂಬರ್ 2019ರ ಕಹಳೆಯ ಒಂಭತ್ತನೇ ಆವೃತ್ತಿ ಕಾರ್ಯಕ್ರಮವನ್ನು ಸಮಸ್ತ ಕನ್ನಡಿಗರ ಪರವಾಗಿ ಮಾತೃಸ್ವರೂಪಿಯಾದ ಕನ್ನಡಾಂಬೆಗೆ ಶ್ರದ್ಧಾಪೂರ್ವಕವಾಗಿ ಅರ್ಪಿಸುತ್ತಿದ್ದೇವೆ.

ಕರ್ನಾಟಕ ಭಾರತದ ನಾಲ್ಕು ಪ್ರಮುಖ ದಕ್ಷಿಣ ರಾಜ್ಯಗಳಲ್ಲಿ ಒಂದು. 1973ಕ್ಕೆ ಮೊದಲು ಕರ್ನಾಟಕದ ಹೆಸರು "ಮೈಸೂರು ರಾಜ್ಯ" ಎಂದಿದ್ದಿತು. ಇದಕ್ಕೆ ಕಾರಣ ಕರ್ನಾಟಕದ ಮೊದಲ ಸೃಷ್ಟಿ ಮೈಸೂರು ಸಂಸ್ಥಾನವನ್ನು ಆಧರಿಸಿದ್ದು.
ಚಿತ್ರ ಕೃಪೆ: ಷಟರ್ ಸ್ಟಾಕ್

"ಕರ್ನಾಟಕ" ಎಂಬ ಹೆಸರಿಗೆ ಅನೇಕ ವ್ಯುತ್ಪತ್ತಿಗಳು ಪ್ರತಿಪಾದಿಸಲ್ಪಟ್ಟಿವೆ. ಎಲ್ಲಕ್ಕಿಂತ ಹೆಚ್ಚಾಗಿ ಒಪ್ಪಲ್ಪಟ್ಟಿರುವ ವ್ಯುತ್ಪತ್ತಿ ಎಂದರೆ ಕರ್ನಾಟಕ ಎಂಬುದು "ಕರು" + "ನಾಡು" ಎಂಬುದರಿಂದ ವ್ಯುತ್ಪತ್ತಿಯನ್ನು ಪಡೆದಿದೆ ಎನ್ನುವುದು. ಕರು ನಾಡು ಎಂದರೆ "ಎತ್ತರದ ಪ್ರದೇಶ" ಎಂದು ಅರ್ಥ. ಕರ್ನಾಟಕ ರಾಜ್ಯವು ಸಮುದ್ರ ಮಟ್ಟದಿಂದ ಸರಾಸರಿ 1500 ಅಡಿ ಎತ್ತರದಲ್ಲಿದ್ದು, ಇದು ಭಾರತದಲ್ಲಿ ಅತೀ ಹೆಚ್ಚಿನ ಸರಾಸರಿ ಎತ್ತರವುಳ್ಳ ರಾಜ್ಯಗಳಲ್ಲಿ ಒಂದಾಗಿದೆ.

ಪೂರ್ವ ಶಿಲಾಯುಗದ ಜನವಸತಿಯಷ್ಟು ಪ್ರಾಚೀನತೆಯಿರುವ ಕರ್ನಾಟಕವು ಭಾರತದ ಅನೇಕ ಪ್ರಬಲ ಸಾಮ್ರಾಜ್ಯಗಳಿಗೆ ನೆಲೆಬೀಡಾಗಿದೆ. ಈ ಸಾಮ್ರಾಜ್ಯಗಳಲ್ಲಿ ಆಶ್ರಯ ಪಡೆದಿದ್ದ ಅನೇಕ ತತ್ವಜ್ಞಾನಿಗಳು ಮತ್ತು ಕವಿಗಳಿಂದ ಆರಂಭಿಸಲ್ಪಟ್ಟಿರುವ ಸಾಮಾಜಿಕ, ಧಾರ್ಮಿಕ ಹಾಗೂ ಸಾಹಿತ್ಯದ ಚಳುವಳಿಗಳು ಇಂದಿನವರೆಗೂ ನಡೆದುಕೊಂಡು ಬಂದಿವೆ.

ಕರ್ನಾಟಕದ ಚರಿತ್ರೆಯ ಕೆಲ ಅಂಶಗಳನ್ನು ಗಮನಿಸುವುದಾದರೆ, ಕರ್ನಾಟಕದ ಚರಿತ್ರೆಯು ಪೂರ್ವ ಶಿಲಾಯುಗದಷ್ಟು ಹಳೆಯದಾಗಿದೆ. ಕರ್ನಾಟಕದಲ್ಲಿ ಭೂಶೋಧನೆಯಿಂದ ದೊರೆತಿರುವ ಕೈಕೊಡಲಿಗಳು ಮತ್ತು ಕಡಗತ್ತಿಗಳು ಪೂರ್ವ ಶಿಲಾಯುಗದ ಹಾಗೂ ಬೃಹತ್ ಶೀಲಾಯುಗದ ಸಂಸ್ಕøತಿಯ ಕುರುಹುಗಳೆಂದು ಹೇಳಲಾಗಿದೆ.

ಹರಪ್ಪದಲ್ಲಿ ಭೂಶೋಧನೆಯಿಂದ ದೊರೆತಿರುವ ಚಿನ್ನವು ಕರ್ನಾಟಕದ ಗಣಿಗಳಿಂದ ಆಮದು ಮಾಡಲ್ಪಟ್ಟಿರುವ ವಿಚಾರದ ಹಿನ್ನೆಲೆಯಲ್ಲಿ ವಿದ್ವಾಂಸರು ಕ್ರಿಸ್ತಪೂರ್ವದಲ್ಲೇ ಕರ್ನಾಟಕ ಮತ್ತು ಸಿಂಧು ಕಣಿವೆ ನಾಗರೀಕತೆ ನಡುವೆ ಸಂಬಂಧಗಳಿದ್ದವೆಂದು ಪ್ರತಿಪಾದಿಸಿದ್ದಾರೆ.

ಕರ್ನಾಟಕದ ಬಹುಪಾಲು ಪ್ರದೇಶವು ಸಾಮ್ರಾಟ ಅಶೋಕನ ಮೌರ್ಯ ಸಾಮ್ರಾಜ್ಯದ ಆಳ್ವಿಕೆಗೆ ಒಳಪಡುವ ಮೊದಲು ನಂದ ಸಾಮ್ರಾಜ್ಯದ ಭಾಗವಾಗಿದ್ದಿತು. ತದನಂತರ, ನಾಲ್ಕು ಶತಮಾನಗಳ ಕಾಲ ಶಾತವಾಹನರು ಕರ್ನಾಟಕದ ಬಹುಪಾಲು ಭಾಗವನ್ನಾಳಿದರು. ಇಂತಹ ಶ್ರೀಮಂತ ಇತಿಹಾಸವುಳ್ಳ ನಮ್ಮ ಕನ್ನಡ ನಾಡಿನಲ್ಲಿರುವುದರ ಬಗ್ಗೆ ನಮಗೆ ಹೆಮ್ಮೆ ಎನಿಸುತ್ತದೆ.

ವಿದ್ಯಾರ್ಥಿ ಕಿರುಪರಿಚಯ
ಮೇಘ, ಹೆಚ್. ಎ.

10ನೇ ತರಗತಿ
ಜ್ಯೋತಿ ವಿದ್ಯಾಲಯ ಶಿಕ್ಷಣ ಸಂಸ್ಥೆ,
ಹೆಸರಘಟ್ಟ, ಬೆಂಗಳೂರು ಉತ್ತರ ತಾಲ್ಲೂಕು, ಬೆಂಗಳೂರು ನಗರ ಜಿಲ್ಲೆ.

Blog  |  Facebook  |  Twitter

1 ಕಾಮೆಂಟ್‌: